ಅರಬ್ಬೀ ಸಮುದ್ರ,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ

1 min read

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ, ಅದರಲ್ಲಿಯೂ ಕರಾವಳಿ ಭಾಗದಲ್ಲಿ ಬಿಡದೇ ಮಳೆ ಸುರಿಯುತ್ತಿದೆ. ಮಳೆಗಾಗಿ ಪ್ರಾರ್ಥಿಸುತ್ತಿದ್ದ ಜನ ಇದೀಗ ಸೂರ್ಯ ದೇವನ ದರ್ಶನ ಯಾವಾಗ ಆಗುತ್ತದೆಯೋ ಎಂದು ಕಾಯುವಂತಾಗಿದೆ. ಈ ನಡುವೆ  ಮತ್ತೆ ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದೆ.

ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಎರಡು ದಿನ ಭರ್ಜರಿ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮುನ್ಸೂಚನೆಯನ್ನು
ರಾಜ್ಯ ಹವಮಾನ ಇಲಾಖೆ ನೀಡಿದೆ.

ಇದಲ್ಲದೆ, ಜುಲೈ 19ರಿಂದ ಅಂದರೆ ವಾಯುಭಾರ ಕುಸಿತದ ನಂತರವೂ ಮಳೆ ಅಬ್ಬರ ಕಡಿಮೆಯಾಗುವ ಲಕ್ಷಣಗಳಿಲ್ಲ. ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಜುಲೈ 19ರಿಂದ  ರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 

You May Also Like

More From Author

+ There are no comments

Add yours