ಹೈಲೈಟ್ಸ್:
- ಮಂಗಳೂರಿನ ಕದ್ರಿಯ ಆಭರಣ ಜ್ಯುವೆಲ್ಲರಿಗೆ ಐಟಿ ದಾಳಿ ನಡೆದಿದೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಆಭರಣ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಳಿಗ್ಗಿನಿಂದಲೂ ಐಟಿ ತಪಾಸಣೆ ನಡೆಯುತ್ತಿದೆ.
- ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಶೋಧ ನಡೆಸುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನ ಖರೀದಿಯ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಳಿಸುತ್ತಿದ್ದಾರೆ.
- ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಆಭರಣ ಜ್ಯುವೆಲ್ಲರಿಯು ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಮಳಿಗೆಗಳಿವೆ.
ಬೆಂಗಳೂರು: ನಿನ್ನೆ ರಾಜ್ಯದ ವಿವಿದೆಡೆ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ ನಡೆದಿತ್ತು. ಕೆಲ ದಿನಗಳ ಹಿಂದೆ ಆಂಧ್ರ ಪ್ರದೇಶದ ಜ್ಯುವೆಲ್ಲರಿ ಅಂಗಡಿಗಳ ಮೇಲೆ ದಾಳಿಯಾಗಿತ್ತು. ಇದೀಗ ಮಂಗಳೂರಿನ ಪ್ರತಿಷ್ಠಿತಿ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿಯಾಗಿದೆ.
ಮಂಗಳೂರಿನ ಕದ್ರಿಯ ಆಭರಣ ಜ್ಯುವೆಲ್ಲರಿಗೆ ಐಟಿ ದಾಳಿ ನಡೆದಿದೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಆಭರಣ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಳಿಗ್ಗಿನಿಂದಲೂ ಐಟಿ ತಪಾಸಣೆ ನಡೆಯುತ್ತಿದೆ.
ಐದಾರು ಜನ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಶೋಧ ನಡೆಸುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನ ಖರೀದಿಯ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಳಿಸುತ್ತಿದ್ದಾರೆ.
ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಆಭರಣ ಜ್ಯುವೆಲ್ಲರಿಯು ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಮಳಿಗೆಗಳಿವೆ. ದ.ಕ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಮಳಿಗೆಗಳಿವೆ. ಉಡುಪಿಯ ಹಲವಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ.
ಮಂಗಳೂರು ಅಷ್ಟೇ ಅಲ್ಲದೆ ಪುತ್ತೂರು, ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಸೇರಿದಂತೆ ಅನೇಕ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
+ There are no comments
Add yours