12 ರಂದು ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ನಾಮ ಪತ್ರ ಸಲ್ಲಿಕೆ

1 min read

ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ 12 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾಮಪತ್ರ ಸಲ್ಲಿಸಿದ ನಂತರ ನಗರದ ಎನ್ ವಿ ಕಾಲೇಜು ಮೈದಾನದಲ್ಲಿ 11.30 ಗಂಟೆಗೆ ಬಹಿರಂಗ ಸಮಾವೇಶ ಏರ್ಪಡಿಸಲಾಗಿದ್ದು, ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ, ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಸರ್ಕಾರದ ಸಚಿವರುಗಳು, ಶಾಸಕರು, ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

You May Also Like

More From Author

+ There are no comments

Add yours