ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಮನುವಾದಿಗಳು ಮೂಢನಂಬಿಕೆ ಬೆಳೆಸುತ್ತಾರೆ; ಸಿಎಂ ಸಿದ್ದರಾಮಯ್ಯ

1 min read

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಅವರಿಗೆ ಬದ್ಧತೆಯಿಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ವ್ಯವಸ್ಥೆ ಇರುವವರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಇಂದು ಸಿಎಂ ಉದ್ಘಾಟಿಸಿ, “2026ರ ಬಸವಶ್ರೀ” ಪ್ರಶಸ್ತಿ ಪ್ರದಾನ ಮಾಡಿದರು.

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಭಾಜನ ಆಗಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಬಸವಣ್ಣನವರು ಸಮಾಜದಲ್ಲಿ ಜಾತಿ ವರ್ಣ ವ್ಯವಸ್ಥೆಗಳ ವಿರುದ್ಧ ಹೋರಾಡಿದರು. ಮೂಢನಂಬಿಕೆಗಳ ವಿರುದ್ಧ ದ್ವನಿ ಎತ್ತಿ, ಕರ್ಮ ಸಿದ್ಧಾಂತವನ್ನು ಅಲ್ಲಗಳೆದಿದ್ದರು.

ಸಾವಿರಾರು ವರ್ಷಗಳಿಂದ ಶೋಷಿತ ವರ್ಗಗಳು ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿದ್ದರು. ಬಸವಾದಿ ಶರಣರು ವೈದಿಕ ಧರ್ಮಕ್ಕೆ ಪರ್ಯಾಯವಾಗಿ ಲಿಂಗಾಯತ ಧರ್ಮಕ್ಕೆ ನಾಂದಿ ಹಾಡಿದರು. ವೈದಿಕ ಧರ್ಮದಲ್ಲಿ ಚತುರ್ವರ್ಣ ವ್ಯವಸ್ಥೆಯಿತ್ತು. ಆದ್ದರಿಂದ 12ನೇ ಶತಮಾನದಲ್ಲಿ ಸಮಾನತೆ, ಮಾನವೀಯತೆಯಿಂದ ಕೂಡಿದ ಲಿಂಗಾಯತ ಧರ್ಮವನ್ನು ಸ್ಥಾಪಿಸಲಾಯಿತು ಎಂದರು.

You May Also Like

More From Author

+ There are no comments

Add yours