BBK 10 : ಡಬಲ್ ಎಲಿಮಿನೇಷನ್..‌ ನಿನ್ನೆ ಇಶಾನಿ ಔಟ್‌, ಇಂದು ಹೊರ ಬರ್ತಾರಾ ಈ ಸ್ಪರ್ಧಿ?

1 min read

Bigg Boss Kannada Season 10 : ಕೊನೆಗೂ ಗ್‌ಬಾಸ್‌ ಮನೆಯಲ್ಲಿ ಇಶಾನಿ ಜರ್ನಿ ಎಂಡ್  ಆಗಿದೆ. ಕಳೆದ ವಾರ ವರ್ತೂರ್ ಸಂತೋಷ್‌ ಅವರ ಕಾರಣದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಈ ವಾರ ಡಬಲ್ ಎಲಿಮಿನೇಷನ್ ವೀಕ್. ಇಬ್ಬರು ಈ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂದು ಕಿಚ್ಚ ಹೇಳಿದ್ದರು.

ಶನಿವಾರದ ಎಪಿಸೋಡ್ ಕೊನೆಯಲ್ಲಿ, ಕಿಚ್ಚ, ‘ಈ ವಾರ ಒಬ್ಬರು ಮನೆಯಿಂದ ಹೊರಗೆ ಹೋಗುತ್ತಿದ್ದಾರೆ. ಅವರು ಯಾರು ಎಂದು ನಿಮಗೇ ಗೊತ್ತಿರಬೇಕು. ಅವರೇ ಎದ್ದು ನಿಂತುಕೊಳ್ಳಿ’ ಎಂದು ಕೇಳಿದರು. ಇಶಾನಿ ಎದ್ದು ನಿಂತುಕೊಂಡರು. ಕಿಚ್ಚ, ‘ನಿಜ. ನಿಮ್ಮ ಪಯಣ ಬಿಗ್‌ಬಾಸ್‌ ಮನೆಯಲ್ಲಿ ಮುಗಿಯುತ್ತಿದೆ. ಆಲ್‌ದಿ ಬೆಸ್ಟ್ ಎಂದು ಹೇಳಿದರು.

ಇಂದಿನ ಎಪಿಸೋಡ್‌ನಲ್ಲಿ ಇನ್ನೊಬ್ಬರು ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಲಿದ್ದಾರೆ. ಹೊರಬಿದ್ದ ಇಬ್ಬರೂ ಸ್ಪರ್ಧಿಗಳ ಜೊತೆ ನಾಳೆಯ ಎಪಿಸೋಡ್‌ನಲ್ಲಿ ಕಿಚ್ಚ ಸಂವಾದ ನಡೆಸಲಿದ್ದಾರೆ.

ಕೊನೆಯದಾಗಿ ಇಶಾನಿ, ‘ನಾನು ಇನ್ನಷ್ಟು ಎಫರ್ಟ್‌ ಹಾಕಬೇಕಾಗಿತ್ತು. ಆಗಲಿಲ್ಲ. ಮನೆಯಿಂದ ಸಾಕಷ್ಟು ಕಲಿತುಕೊಂಡಿದ್ದೀನಿ. ಉಳಿದ ಎಲ್ಲ ಸ್ಪರ್ಧೆಗಳಿಗೆ ಆಲ್‌ ದಿ ಬೆಸ್ಟ್’ ಎಂದು ಹೇಳಿದರು.

ಅಲ್ಲಿಗೆ ಶನಿವಾರದ ‘ಕಿಚ್ಚನ ಪಂಚಾಯಿತಿ’ ಮುಗಿದಿದೆ. ನಾಳೆ ಮತ್ಯಾವ ಸ್ಪರ್ಧಿ ಮನೆಯಿಂದ ಹೊರಬೀಳಲಿದ್ದಾರೆ ಎಂಬ ಕುತೂಹಲ ಹಾಗೆಯೇ ಉಳಿದುಕೊಂಡಿದೆ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.

 

You May Also Like

More From Author

+ There are no comments

Add yours