ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.
ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಇಂದು ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ.
ಎಸ್ಎಸ್ಎಲ್ಸಿ ಫಲಿತಾಂಶ, ಆನ್ಲೈನ್ನಲ್ಲಿ ನೋಡುವುದು ಹೇಗೆ?: ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ
ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
ಹೊಸ ಲಾಗಿನ್ ಪುಟವು ತೆರೆಯುತ್ತದೆ
ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ
+ There are no comments
Add yours